ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾಖಲೆ ಇದ್ರೆ ಕೊಡಿ ಎಂದಿದ್ದು ಅವರಿಗೆ ಹೆಚ್ಚಿನ ಮಾಹಿತಿ ಇದೆ ಅಂತ - ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು - ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಕುಮಾರಸ್ವಾಮಿಯವರಂತಹ ಅಸಮರ್ಥ ವ್ಯಕ್ತಿ ಸಿಎಂ ಆಗಬಹುದಾದರೆ ನಾನು ಗೃಹ ಸಚಿವನಾಗಲು ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ವೈಯಕ್ತಿಕ ಟೀಕೆ ಮಾಡುವುದನ್ನು ಬಿಟ್ಟು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಖಾಸಗಿಯಾಗಿ ಯಾರೋ ಇ-ಮೇಲ್ ಕಳುಹಿಸಿದ್ದಾರೆ ಅದರ ಬಗ್ಗೆ ನೇರವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಮೊದಲು ಮಹಿಳಾ ಆಯೋಗಕ್ಕೆ ದೂರು ಬರಬೇಕು, ಬಳಿಕ ತನಿಖೆ ಕೈಗೊಳ್ಳಲಾಗುತ್ತದೆ. ಮಾಜಿ ಸಿಎಂ ಹಾಗೂ ಹಾಲಿ ಕೇಂದ್ರ ಸಚಿವರಿಗೆ ಇಷ್ಟು ಸಾಮಾನ್ಯ ಜ್ಞಾನವೂ ಇಲ್ಲವೇ? 2018ರಲ್ಲಿ ಸಿಎಂ ಆಗಿದ್ದಾಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ತಮ್ಮ ಸಾಮರ್ಥ್ಯದ ಬಗ್ಗೆ ಕುಮಾರಸ್ವಾಮಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Edited By :
PublicNext

PublicNext

04/11/2026 08:03 pm

Cinque Terre

4.83 K

Cinque Terre

0

ಸಂಬಂಧಿತ ಸುದ್ದಿ