ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ : ಅವ್ವ ಟ್ರಸ್ಟ್ ಸೇವಾ ಕಾರ್ಯಗಳು ಅತ್ಯಂತ ಶ್ಲ್ಯಾಘನೀಯ :ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ : ಅವ್ವ ಸೇವಾ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಗಳು ಅತ್ಯಂತ ಶ್ಲಾಘನೀಯವಾಗಿವೆ. ತಂದೆ-ತಾಯಿಯವರ ಹೆಸರುಗಳನ್ನು ಅಜರಾಮರವಾಗಿರಿಸುವುದರ ಜೊತೆಗೆ ಬಡವರು, ದೀನದಲಿತರು ಹಾಗೂ ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ ಟ್ರಸ್ಟ್ ಹಗಲಿರುಳು ಶ್ರಮಿಸುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟರು.

ಅವರು ಬುಧವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅವ್ವ ಸೇವಾ ಟ್ರಸ್ಟ್, ಹುಬ್ಬಳ್ಳಿ ವತಿಯಿಂದ ಆಯೋಜಿಸಲಾಗಿದ್ದ ಪ್ರೌಢಶಾಲಾ ಹಂತದಲ್ಲಿ ಶಿಕ್ಷಕ-ಶಿಕ್ಷಕಿಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಕುರಿತು ಉಪನ್ಯಾಸ ಹಾಗೂ ಎಫ್.ಎಲ್.ಎನ್. ಕಾರ್ಯಾಗಾರ-2026, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಹಾಗೂ ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ 15 ವರ್ಷಗಳಿಂದ ಅವ್ವ ಸೇವಾ ಟ್ರಸ್ಟ್ ಮೂಲಕ ಸಮಾಜದಲ್ಲಿ ಅವಿಸ್ಮರಣೀಯ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ, ಆರೋಗ್ಯ ಸೇವೆ, ಪರಿಸರ ರಕ್ಷಣೆ ಹಾಗೂ ವಿಶೇಷ ಚೇತನರಿಗೆ ಆಸರೆ ನೀಡುವಂತಹ ಉದಾತ್ತ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ ಶಿಕ್ಷಕ-ಶಿಕ್ಷಕಿಯರ ಸಮಾವೇಶಗಳು ಸೇರಿದಂತೆ ಹಲವು ಸಂಘಟನಾತ್ಮಕ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲಾಗಿದೆ ಎಂದರು.

ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಶಿಕ್ಷಣವು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗಿರಬಾರದು. ಉತ್ತಮ ಸಂಸ್ಕಾರ ನೀಡುವುದು, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸುವುದು ಹಾಗೂ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕ ಬಸವರಾಜ ಹೊರಟ್ಟಿ ಮಾತನಾಡಿ, ಆರ್ಥಿಕವಾಗಿ ದುರ್ಬಲರಾದವರು, ವಿಶೇಷ ಚೇತನರು ಹಾಗೂ ಅಪಘಾತದಲ್ಲಿ ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡುವುದರ ಜೊತೆಗೆ ಉನ್ನತ ವ್ಯಾಸಂಗಕ್ಕೂ ಅವ್ವ ಸೇವಾ ಟ್ರಸ್ಟ್ ಮೂಲಕ ಸಹಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಅವರು ಅವ್ವ ಸೇವಾ ಟ್ರಸ್ಟ್ ಬೆಳೆದು ಬಂದ ಹಾದಿಯನ್ನು ಪ್ರಾಸ್ತಾವಿಕವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಶಶಿಭೂಷಣ ಹೆಗಡೆ, ಡಿಡಿಪಿಐ ಡಿ.ಆರ್. ನಾಯ್ಕ್, ಎಸ್.ಡಿ. ಮೂಡೆನ್ನವರ್, ಜಯಶ್ರೀ, ಡಾ. ಗೀತಾ ವಸಂತ, ಉತ್ತರ ಕನ್ನಡ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕಿರಣಕುಮಾರ ನಾಯ್ಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನಾರಾಯಣ ದೈಮನೆ ಅವರು ಸ್ವಾಗತಿಸಿದರು. ಸವಿತಾ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿದರು.

Edited By : PublicNext Desk
Kshetra Samachara

Kshetra Samachara

04/11/2026 08:33 pm

Cinque Terre

6.5 K

Cinque Terre

0

ಸಂಬಂಧಿತ ಸುದ್ದಿ