ಕಡೂರು ತಾಲೂಕಿನ ದೊಡ್ಡಪಟ್ಟಣಗೆರೆ ಗ್ರಾಮದ ಜಮೀನೊಂದರ ಬಂಡಿ ದಾರಿಯಲ್ಲಿ ಮೇಣದ ಬತ್ತಿ ಬೆಳಕಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕತ್ತಲೆಯಲ್ಲಿ 'ನೂರು ಒಳಕ್ಕೆ, ನೂರು ಹೊರಕ್ಕೆ' ಎಂದು ಹಣವನ್ನು ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದ ರಮೇಶ್, ನಾಗರಾಜ್ ಸೇರಿದಂತೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ದಾಳಿ ವೇಳೆ 42,830 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಲಾಗಿದ್ದು, ಕಾರ್ಯಾಚರಣೆ ವೇಳೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
Kshetra Samachara
04/11/2026 08:53 pm
LOADING...