ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಮತದಾನದ ಹಕ್ಕಿಗೆ ಕನ್ನ ಯತ್ನ, ಫಾರಂ-7 ದುರ್ಬಳಕೆ ಖಂಡಿಸಿ ಬೃಹತ್ ಪ್ರತಿಭಟನೆ

ಮೂಡಿಗೆರೆ: ಮತದಾರರ ಪಟ್ಟಿಯಿಂದ ನಿರ್ದಿಷ್ಟ ಸಮುದಾಯದವರ ಹೆಸರನ್ನು ಕೈಬಿಡಲು ಫಾರಂ-7 ನ್ನು ಉದ್ದೇಶಪೂರ್ವಕವಾಗಿ ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಣಕಲ್ ಹೋಬಳಿಯ ಮೀಲಾದ್ ಟ್ರಸ್ಟ್ ವತಿಯಿಂದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಈ ಕುರಿತು ಈಗಾಗಲೇ ಎರಡು ಬಾರಿ ದೂರು ನೀಡಿದ್ದರೂ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮುಖಂಡರು, ಪ್ರಜಾಪ್ರಭುತ್ವದ ಜೀವಾಳವಾದ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯತ್ನದಲ್ಲಿ ಭಾಗಿಯಾದವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿದ್ದಾರೆ.

ರಾಜಕೀಯ ಪ್ರಭಾವಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಟ್ರಸ್ಟ್ ಅಧ್ಯಕ್ಷ ಜಾಕೀರ್ ಹುಸೈನ್ ಹಾಗೂ ಇತರ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Edited By : Somashekar
PublicNext

PublicNext

04/11/2026 09:39 pm

Cinque Terre

3.6 K

Cinque Terre

0

ಸಂಬಂಧಿತ ಸುದ್ದಿ