ಕನಕಗಿರಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ಎಲ್ ಆ್ಯಂಡ್ ಟಿ (L&T) ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವಿನಾಶ್ ಆರ್. (39) ಎಂದು ಗುರುತಿಸಲಾಗಿದೆ.
ನವೆಂಬರ್ 4ರಂದು ಮುಂಜಾನೆ ಸುಮಾರು 4.30ರ ವೇಳೆಗೆ ಕನಕಗಿರಿಯಿಂದ ಗಂಗಾವತಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವಿನಾಶ್ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.
ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Kshetra Samachara
04/11/2026 09:42 pm
LOADING...