ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಒಂದೇ ಆಟೋದಲ್ಲಿ 14 ಶಾಲಾ ಮಕ್ಕಳು ಪ್ರಯಾಣ,ಕುರಿಗಳಂತೆ ಮಕ್ಕಳನ್ನು ತುಂಬಿಕೊಂಡು ರಸ್ತೆಗಿಳಿದ ಚಾಲಕ

ಹುಬ್ಬಳ್ಳಿಯಲ್ಲಿ ಕೆಲ ಆಟೋ ಚಾಲಕರು ಸಂಚಾರಿ ನಿಯಮಗಳನ್ನೇ ಗಾಳಿಗೆ ತೂರಿ ವಾಹನ ಚಲಾಯಿಸುತ್ತಿರುವ ಘಟನೆಗಳು ಕಂಡುಬರುತ್ತಿವೆ. ಸಾಮಾನ್ಯವಾಗಿ ಮೂವರು ಪ್ರಯಾಣಿಕರು ಪ್ರಯಾಣಿಸಬೇಕಾದ ಆಟೋದಲ್ಲಿ ಬರೋಬ್ಬರಿ 14 ಶಾಲಾ ಮಕ್ಕಳನ್ನು ತುಂಬಿಕೊಂಡು ಹೋಗಿರುವ ಘಟನೆ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್ ಬಳಿ ಬೆಳಕಿಗೆ ಬಂದಿದೆ.

ಮಕ್ಕಳನ್ನು ಕುರಿಗಳಂತೆ ಒಂದೇ ಆಟೋದಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯ ನೋಡಿದ್ರೆ, ಈ ಆಟೋ ಚಾಲಕರಿಗೆ ಸಂಚಾರಿ ಪೊಲೀಸರ ಭಯವೇ ಇಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಒಂದು ವೇಳೆ ಆಟೋ ನಿಯಂತ್ರಣ ತಪ್ಪಿದ್ರೆ ಅಥವಾ ಅಪಘಾತ ಸಂಭವಿಸಿದ್ರೆ ಈ 14 ಮಕ್ಕಳ ಜೀವಕ್ಕೆ ಯಾರು ಹೊಣೆ?ಮಕ್ಕಳ ಸುರಕ್ಷತೆಯೇ ಮೊದಲ ಆದ್ಯತೆಯಾಗಬೇಕಾದ ಶಾಲಾ ಆಡಳಿತ ಮಂಡಳಿಗಳು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಕೇವಲ ಮಕ್ಕಳನ್ನು ಶಾಲೆಗೆ ಕರೆತಂದು ಬಿಡುವುದಷ್ಟೇ ಜವಾಬ್ದಾರಿಯಲ್ಲ, ಅವರ ಸುರಕ್ಷಿತ ಪ್ರಯಾಣದ ಬಗ್ಗೆಯೂ ಗಮನ ಹರಿಸಬೇಕಿದೆ.

ಸದ್ಯ ಒಂದೇ ಆಟೋದಲ್ಲಿ 14 ಮಕ್ಕಳನ್ನು ತುಂಬಿಕೊಂಡು ಹೋಗಿರುವ ಚಾಲಕನ ವಿರುದ್ಧ ಹುಬ್ಬಳ್ಳಿ-ಧಾರವಾಡ ಸಂಚಾರಿ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.ಇನ್ನಾದರೂ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು ಅಧಿಕಾರಿಗಳ ಸಭೆ ನಡೆಸಿ, ಶಾಲಾ ಆಡಳಿತ ಮಂಡಳಿಗಳು ಹಾಗೂ ಆಟೋ ಚಾಲಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ, ಮಕ್ಕಳ ಸುರಕ್ಷಿತ ಪ್ರಯಾಣದ ಕುರಿತು ಜಾಗೃತಿ ಮೂಡಿಸಬೇಕಿದೆ.

ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

04/11/2026 09:48 pm

Cinque Terre

9.2 K

Cinque Terre

1

ಸಂಬಂಧಿತ ಸುದ್ದಿ