ಮೈಸೂರು: ರಾಜ್ಯದಲ್ಲಿ ಬಸ್ ಪ್ರಯಾಣ ದರ ಹಾಗೂ ಹಾಲಿನ ದರ ಏರಿಕೆಯನ್ನು ಸಚಿವ ಈಶ್ವರ್ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ . ಮೈಸೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದರಿಂದ ರಾಜ್ಯದಲ್ಲಿಯೂ ವಿವಿಧ ವಸ್ತುಗಳ ಬೆಲೆ ಏರಿಕೆ ಮಾಡುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲಾ ಬೆಲೆ ಏರಿಕೆಗೂ ಕೇಂದ್ರ ಸರ್ಕಾರವೇ ಕಾರಣ ಎಂದು ಹೇಳಿದರು.
ರಾಜ್ಯ ಸರ್ಕಾರ ತನ್ನ ಇತಿಮಿತಿಯಲ್ಲಿಯೇ ಬೆಲೆ ಏರಿಕೆಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಆದರೆ, ಅನಿವಾರ್ಯವಾಗಿ ಬೆಲೆ ಏರಿಕೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದರು.
ಹಾಲಿನ ದರ ಹೆಚ್ಚಳದಿಂದ ಸಂಗ್ರಹವಾಗುವ ಹಣ ಸರ್ಕಾರದ ಖಜಾನೆಗೆ ಸೇರುವುದಿಲ್ಲ. ಆ ಹಣವನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಇನ್ನು ರಾಜ್ಯ ಸರ್ಕಾರ ಹಾಗೂ ಸರ್ಕಾರದ ಖಜಾನೆ ಎರಡೂ ಗಟ್ಟಿಯಾಗಿವೆ. ಸರ್ಕಾರಕ್ಕೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
PublicNext
04/11/2026 09:53 pm
LOADING...