ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುವಕರ ಗುಂಪುಗಳ ಮಧ್ಯೆ ಹೊಡೆದಾಟ: ಸಿಸಿಟಿವಿ ದೃಶ್ಯ ವೈರಲ್

ಧಾರವಾಡ: ಯುವಕರ ಗುಂಪೊಂದು ಇನ್ನೊಂದು ಯುವಕರ ಗುಂಪಿನ ಮೇಲೆ ಹಲ್ಲೆ ನಡೆಸಿದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಧಾರವಾಡ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕಾಗಿ ಯುವಕರ ಗುಂಪು ಹಲ್ಲೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಘಟನೆಯಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಧಾರವಾಡ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಧಾರವಾಡದಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ. ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಂಡು ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಹಾಕಬೇಕಾಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

04/11/2026 10:08 pm

Cinque Terre

21.05 K

Cinque Terre

0

ಸಂಬಂಧಿತ ಸುದ್ದಿ