ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಅವೈಜ್ಞಾನಿಕ ನಿರ್ಧಾರವಾಗಿದೆ. ಸರ್ಕಾರ ಬಡವರ ಸುಲಿಗೆಗೆ ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಒಂದೆಡೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿ, ಮತ್ತೊಂದೆಡೆ ಪುರುಷರ ಪ್ರಯಾಣದ ದರ ಹೆಚ್ಚಿಸುವ ಮೂಲಕ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕೂಡಲೇ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Edited By : Somashekar
PublicNext

PublicNext

04/11/2026 10:10 pm

Cinque Terre

3.66 K

Cinque Terre

0

ಸಂಬಂಧಿತ ಸುದ್ದಿ