ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಚಿತ್ರದುರ್ಗ: ರಾಜ್ಯದಲ್ಲಿ ಬೆಲೆ ಏರಿಕೆ, ಆಡಳಿತ ವೈಫಲ್ಯ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡದ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಚಿತ್ರದುರ್ಗದಲ್ಲಿ ನಡೆದ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಜನಜಾಗೃತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕುತಂತ್ರಗಳನ್ನು ಜನರ ಮುಂದೆ ಬಯಲಿಗೆಳೆಯುವ ಉದ್ದೇಶದಿಂದ ಬಿಜೆಪಿ ಹೋರಾಟ ನಡೆಸುತ್ತಿದೆ ಎಂದರು.

ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸರ್ಕಾರ ಇದೀಗ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಿದೆ. ರಾಜ್ಯದಲ್ಲಿ ಗುತ್ತಿಗೆದಾರರಿಗೆ ಸುಮಾರು 38 ಸಾವಿರ ಕೋಟಿ ರೂಪಾಯಿ ಹಳೆಯ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಗುತ್ತಿಗೆದಾರರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್ ಖರೀದಿಸಲು ಹಾಗೂ ವಿಕಲಚೇತನರಿಗೆ ಗೌರವಧನ ನೀಡಲೂ ಸರ್ಕಾರದ ಬಳಿ ಹಣವಿಲ್ಲದಂತಾಗಿದೆ. ರಾಜ್ಯದ ಖಜಾನೆ ಖಾಲಿಯಾಗಿರುವುದರಿಂದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬಿಸಿ ಬೀಳುತ್ತಿದೆ ಎಂದು ಆರೋಪಿಸಿದರು.

Edited By : Somashekar
PublicNext

PublicNext

04/11/2026 10:22 pm

Cinque Terre

3.7 K

Cinque Terre

0

ಸಂಬಂಧಿತ ಸುದ್ದಿ