ಬೆಳಗಾವಿ: ಜಿಲ್ಲಾಡಳಿತದ ನಿಷೇಧಾಜ್ಞೆಯ ನಡುವೆಯೂ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈತರು ಪಾದಯಾತ್ರೆ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರವೇಶಿಸಿ ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ತಡೆ ಮಾಡದಂತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದರೂ, ರೈತರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ಆಗಮಿಸಿ ಹೆದ್ದಾರಿಯಲ್ಲಿ ಧರಣಿ ನಡೆಸುತ್ತಿದ್ದಾರೆ.
ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ರೈತರು ಜೈಲ್ ಭರೋ ಚಳವಳಿಗೆ ಮುಂದಾಗಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶದೊಂದಿಗೆ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹತ್ತರಗಿ ಟೋಲ್ ನಾಕಾ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು, ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
PublicNext
04/11/2026 10:57 pm
LOADING...