ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಬ್ಬು ಬೆಳೆಗಾರರ ಜೈಲ್ ಭರೋ ಚಳುವಳಿ ಹಿನ್ನೆಲೆ: ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ನವೆಂಬರ್ 5) ಹಮ್ಮಿಕೊಂಡಿರುವ ಜೈಲ್ ಭರೋ ಚಳುವಳಿಯ ಹಿನ್ನೆಲೆಯಲ್ಲಿ ಬೆಳಗಾವಿ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ ಅವರು ಈ ಆದೇಶ ಹೊರಡಿಸಿದ್ದು, ಐದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ರೈತರ ಪಾದಯಾತ್ರೆಗೆ ಬೆಳಗಾವಿ ನಗರ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜೈಲ್ ಭರೋ ಚಳುವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವ ಸಾಧ್ಯತೆಯಿದ್ದು, ಇದರಿಂದ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌) ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Edited By :
PublicNext

PublicNext

04/11/2026 11:01 pm

Cinque Terre

6.24 K

Cinque Terre

0

ಸಂಬಂಧಿತ ಸುದ್ದಿ