ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ನವೆಂಬರ್ 5ರಂದು ಬಿಜೆಪಿ ಬೃಹತ್ ಪಾದಯಾತ್ರೆ; ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ : ​ಶಿವಮೊಗ್ಗದಲ್ಲಿ ಬೃಹತ್ ಪಾದಯಾತ್ರೆಗೆ ಬಿಜೆಪಿ ಕರೆ ನೀಡಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಬದ್ಧ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಉಳಿಸುವ ಉದ್ದೇಶದಿಂದ ನವೆಂಬರ್ 5ರಂದು ಶಿವಮೊಗ್ಗದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಹಾಗೂ ಜನಾಂದೋಲನವನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದಲ್ಲಿ ತಿಳಿಸಿದ್ದಾರೆ.

ಶಿಕಾರಿಪುರದಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಆರಂಭವಾಗಲಿರುವ ಈ 5 ರಿಂದ 6 ಕಿಲೋಮೀಟರ್ ಪಾದಯಾತ್ರೆಯು ಫ್ರೀಡಂ ಪಾರ್ಕ್‌ವರೆಗೆ ಸಾಗಲಿದೆ. ಈ ಬೃಹತ್ ಜನಾಂದೋಲನದಲ್ಲಿ ಬಿಜೆಪಿ ಕಾರ್ಯಕರ್ತರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಅನೇಕ ಪ್ರಮುಖ ಗಣ್ಯರು ಹಾಗೂ ನಾಯಕರು ಭಾಗವಹಿಸಲಿದ್ದಾರೆ ಎಂದರು.

Edited By :
PublicNext

PublicNext

05/11/2026 07:41 am

Cinque Terre

2.62 K

Cinque Terre

0

ಸಂಬಂಧಿತ ಸುದ್ದಿ