ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ​ಕಾಂಗ್ರೆಸ್‌ನಿಂದ ತಪ್ಪು ಮಾಹಿತಿ, ದೇಶದಲ್ಲಿ ಅರಾಜಕತೆಗೆ ಯತ್ನ; ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ.

ಶಿವಮೊಗ್ಗದ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆ ನಡೆಸುವುದಷ್ಟೇ ಅಲ್ಲ, ಪ್ರತಿ ಮತದಾರರನ್ನು ಗೌರವಿಸುವುದು ಮತ್ತು ಸಂವಿಧಾನಿಕ ಸಂಸ್ಥೆಗಳ ನಂಬಿಕೆಯನ್ನು ಕಾಪಾಡುವುದು ಅತ್ಯಂತ ಮುಖ್ಯ ಎಂದರು.

ಚುನಾವಣೆಯಲ್ಲಿ ಗೆದ್ದಾಗ ಜನಾದೇಶವನ್ನು ಒಪ್ಪಿಕೊಳ್ಳುವ ಕಾಂಗ್ರೆಸ್, ಸೋತಾಗ ಮಾತ್ರ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಜಪಿಸುತ್ತದೆ. ಚುನಾವಣಾ ಸೋಲಿನಿಂದ ಕಂಗಾಲಾಗಿರುವ ಕಾಂಗ್ರೆಸ್ ಪ್ರಸ್ತುತ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದರು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಗೆ ಪ್ರತಿ ನಾಗರಿಕರೂ ಸಂಪೂರ್ಣ ಸಹಕಾರ ನೀಡಬೇಕೆಂದು ಸಂಸದರು ಮನವಿ ಮಾಡಿದ್ದಾರೆ. ಮೃತಪಟ್ಟವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆಗಳಲ್ಲಿ ಹೆಸರಿರುವವರ ವಿವರಗಳನ್ನು ಸರಿಯಾಗಿ ಪರಿಶೀಲಿಸಲು ಎಸ್ ಐಆರ್ ಅತ್ಯಗತ್ಯವಾಗಿದೆ. ಈಗಾಗಲೇ ಕರ್ನಾಟಕದಲ್ಲಿ 10 ಲಕ್ಷಕ್ಕೂ ಹೆಚ್ಚು ಹೊಸ ಯುವ ಮತದಾರರು ಸೇರ್ಪಡೆಯಾಗಿದ್ದಾರೆ ಎಂದರು.

Edited By :
PublicNext

PublicNext

05/11/2026 07:59 am

Cinque Terre

2.94 K

Cinque Terre

0

ಸಂಬಂಧಿತ ಸುದ್ದಿ