ಸಾಲಿಗ್ರಾಮ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಲಿಗ್ರಾಮದಲ್ಲಿ ಪ್ರತಿಭಟನೆ ನಡೆಯಿತು.
ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಆರಂಭಗೊಂಡ ಪ್ರತಿಭಟನಾ rally ಸಾಲಿಗ್ರಾಮದ ಮುಖ್ಯ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಸಾಗಿ ಬಂದು, ಬಳಿಕ ಸಾಲಿಗ್ರಾಮ ಬಸ್ ನಿಲ್ದಾಣದ ಬಳಿ ಸಮಾವೇಶಗೊಂಡಿತು.
ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಎಸ್‌ಐಆರ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಂತರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮ ಪೂಜಾರಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
PublicNext
05/11/2026 08:04 am
LOADING...