ದೆಹಲಿ : ಮಯೂರ್ ವಿಹಾರ್‌ನ ಖಾಸಗಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂರನೇ ತರಗತಿಯಲ್ಲಿ ಓದುತ್ತಿದ್ದ 9 ವರ್ಷದ ಬಾಲಕಿಯೊಬ್ಬಳು ತರಗತಿಗೆ ನಡೆದುಕೊಂಡು ಬರುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ.
ತಕ್ಷಣ ಶಿಕ್ಷಕಿ ನೆರವಿಗೆ ಧಾವಿಸಿದ್ದು, ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಬಾಲಕಿಗೆ ಹೃದಯ ಸ್ತಂಭನ ಸಂಭವಿಸಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
ಈ ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾರ್ವಜನಿಕರಿಗೆ ಸಂದೇಶ: ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು. ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿ. ಶಾಲೆಗಳಲ್ಲಿ ತುರ್ತು ವೈದ್ಯಕೀಯ ನೆರವು ಮತ್ತು ಸಿಪಿಆರ್ ಸೌಲಭ್ಯ ಇರುವುದೂ ಅತ್ಯಗತ್ಯ.
PublicNext
05/11/2026 08:18 am
LOADING...