ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭದ್ರಾ ಜಲಾಶಯದ ಬಳಿ ರೈತರ ಪ್ರತಿಭಟನೆ, ಹೆಚ್ಚುವರಿ ನೀರು ಹರಿಸಲು ವಿರೋಧ

ಶಿವಮೊಗ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚುವರಿಯಾಗಿ ನೀರು ಹರಿಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ವಿರೋಧಿಸಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ನೂರಾರು ರೈತರು ಭದ್ರಾ ಜಲಾಶಯದ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.

ಮುಂಗಾರು ಅಭಾವದ ನಡುವೆಯೂ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡಲು ಸರ್ಕಾರ ನಿರ್ಧರಿಸಿರುವುದು ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ 3 ಟಿಎಂಸಿ ನೀರನ್ನು ಹರಿಸಲಾಗಿದೆ. ಹೀಗಿರುವಾಗ ಮತ್ತೆ ಹೆಚ್ಚುವರಿ ನೀರನ್ನು ಹರಿಸಿದರೆ ಮುಂಬರುವ ಬೇಸಿಗೆಯಲ್ಲಿ ಅಚ್ಚುಕಟ್ಟು ಪ್ರದೇಶದ ಜನರಿಗೆ ಕುಡಿಯುವ ನೀರು ಹಾಗೂ ತೋಟಗಾರಿಕಾ ಬೆಳೆಗಳಿಗೆ ತೀವ್ರ ನೀರಿನ ಅಭಾವ ಎದುರಾಗಲಿದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಭದ್ರಾವತಿ ತಹಶೀಲ್ದಾರ್ ಪ್ರದೀಪ್ ದೇವಗಿರಿ ಅವರು ಭೇಟಿ ನೀಡಿ, ರೈತರಿಂದ ಮನವಿ ಪತ್ರವನ್ನು ಸ್ವೀಕರಿಸಿದರು.

ಈ ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆ.ಟಿ. ಗಂಗಾಧರ್, ಯಶವಂತರಾವ್ ಘೋರ್ಪಡೆ ಸೇರಿದಂತೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ನೂರಾರು ರೈತರು ಸಕ್ರಿಯವಾಗಿ ಭಾಗವಹಿಸಿದ್ದರು.

Edited By :
PublicNext

PublicNext

05/11/2026 08:33 am

Cinque Terre

2.33 K

Cinque Terre

0

ಸಂಬಂಧಿತ ಸುದ್ದಿ