ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ರೈತರ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ, ರೈತರ ವಿರೋಧದ ನಡುವೆಯೂ ಸಕ್ಕರೆ ಸಾಗಣೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸಕ್ಕರೆ ತುಂಬಿಕೊಂಡು ಲಾರಿಯಲ್ಲಿ ಸಾಗುತ್ತಿದ್ದ ವಾಹನವನ್ನು ರೈತರು ತಡೆದು ವಶಕ್ಕೆ ಪಡೆದ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಬ್ಬಿನ ದರ ನಿಗದಿಯಾಗುವವರೆಗೂ ಸಕ್ಕರೆ ಮಾರಾಟ ಮಾಡಬಾರದು ಎಂದು ಆಗ್ರಹಿಸಿರುವ ರೈತರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ರೈತರ ಬೇಡಿಕೆ ಈಡೇರುವವರೆಗೂ ಸಕ್ಕರೆ ಮಾರಾಟ ಹಾಗೂ ಸಾಗಣೆ ಮಾಡದಂತೆ ಕಾರ್ಖಾನೆ ಮಾಲೀಕರಿಗೆ ಮನವಿ ಮಾಡಿದ್ದರು.
ಆದರೆ, ರೈತರ ಮನವಿಯನ್ನು ಧಿಕ್ಕರಿಸಿ ಕಳ್ಳಮಾರ್ಗದಲ್ಲಿ ಸಕ್ಕರೆ ಮಾರಾಟ ಮತ್ತು ಸಾಗಣೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಕ್ಕರೆ ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ತಡೆದು ತಮ್ಮ ವಶಕ್ಕೆ ಪಡೆದಿದ್ದಾರೆ.
ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ರೈತರ ಹೋರಾಟದ ನಡುವೆಯೇ ಸಕ್ಕರೆ ಸಾಗಣೆ ವಿಚಾರ ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.
PublicNext
05/11/2026 08:55 am
LOADING...