ಧಾರವಾಡ: ಹಿರಿಯ ರಾಜನೀತಿಜ್ಞ ದಿ. ಕೆ.ಎಚ್. ರಂಗನಾಥ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ನ. 7ರಂದು ಸಂಜೆ 4.30ಕ್ಕೆ ನಗರದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಮಹಾದೇವ ಹೊರಟ್ಟಿ ತಿಳಿಸಿದರು.
ಧಾರವಾಡ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಶಾಂತಿ ಮಿಷನ್ ಟ್ರಸ್ಟ್ ಹಾಗೂ ಶ್ರೀ ಬಸವೇಶ್ವರ ಗ್ರಾಮೀಣ ಶಿಕ್ಷಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಎಫ್.ಎಚ್. ಜಕ್ಕಪ್ಪನವರ, ಮಾಜಿ ಸಚಿವ ಎಚ್. ಆಂಜನೇಯ, ಹುಡಾ ಅಧ್ಯಕ್ಷ ರಾಬರ್ಟ್ ದದ್ದಾಪುರಿ, ಕಾಂಗ್ರೆಸ್ ನಾಯಕ ವಿಜಯಕುಮಾರ, ಸಾಹಿತಿ ರಂಜಾನ್ ದರ್ಗಾ ಹಾಗೂ ಮನೋವಿಜ್ಞಾನಿ ಡಾ. ಅಶೋಕ ಪಾಲ್ ಪಾಲ್ಗೊಳ್ಳಲಿದ್ದಾರೆ. ವೀರಣ್ಣ ಮತ್ತಿಕಟ್ಟಿ ಅಧ್ಯಕ್ಷತೆ ವಹಿಸುವರು. ಡಾ. ಶ್ರೀಧರ ಕುಲಕರ್ಣಿ, ಡಾ. ಶಾರದಾ ಭಟ್, ಡಾ. ಅರ್ಜುನ ವಠಾರ ಹಾಗೂ ಎಂಜಲಿನಾ ಗ್ರೆಗರಿ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀ ಬಸವೇಶ್ವರ ಗ್ರಾಮೀಣ ಶಿಕ್ಷಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಶರಣಪ್ಪ ಕೊಟಗಿ, ವಿ.ಜಿ. ಪಾಟೀಲ, ದೇವಾನಂದ ರತ್ನಾಕರ, ಪ್ರಶಾಂತ ಯಾವಗಲ್ ಹಾಗೂ ಮಂಜುನಾಥ ಮೊಹರೆ ಇದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/11/2026 10:10 am
LOADING...