ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ : ಕನ್ನಡದ ಪ್ರಮುಖ ಕತೆಗಾರ, ಹಿರಿಯ ವಿಜ್ಞಾನಿ ಡಾ. ವ್ಯಾಸರಾವ್ ನಿಂಜೂರು ನಿಧನ

ಮಲ್ಪೆ : ಕನ್ನಡದ ಪ್ರಮುಖ ಕತೆಗಾರ ಹಾಗೂ ಹಿರಿಯ ವಿಜ್ಞಾನಿ, ತೆಂಕನಿಡಿಯೂರು ಮೂಲದ ಡಾ. ವ್ಯಾಸರಾವ್ ನಿಂಜೂರು (86) ಅವರು ಮುಂಬಯಿಯಲ್ಲಿ ನಿಧನರಾಗಿದ್ದಾರೆ.

ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸಾಹಿತಿ, ಸಂಶೋಧಕ ಹಾಗೂ ಚಿಂತಕರಾಗಿದ್ದ ಅವರು ಮುಂಬಯಿಯ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದರೂ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು.

ಕಥೆ, ಲೇಖನ ಹಾಗೂ ಸಾಹಿತ್ಯ ಸಂಶೋಧನೆಯ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ಮುಂಬಯಿಯ ಗೋಕುಲವಾಣಿ ಪತ್ರಿಕೆಯ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದರು. 2006ರಲ್ಲಿ ಇನ್ನಾದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಮಾರ್ಗದರ್ಶನದಲ್ಲಿ ಹಲವು ವಿದ್ಯಾರ್ಥಿಗಳು ಸಂಶೋಧನೆ ನಡೆಸಿ ಪಿಎಚ್.ಡಿ. ಪದವಿ ಗಳಿಸಿದ್ದಾರೆ.

ಬಿಎಆರ್‌ಸಿಯಲ್ಲಿ ಜೀವರಸಾಯನ ಮತ್ತು ಆಹಾರ ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧಕರಾಗಿ ಸುದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. 82ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು ದೇಶ-ವಿದೇಶಗಳ ಪ್ರತಿಷ್ಠಿತ ವೈಜ್ಞಾನಿಕ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.

ಅವರ 'ನಲ್ವತ್ತರ ನಲುಗು' ನಾಟಕಕ್ಕೆ ಕರ್ನಾಟಕ ನಾಟಕ ಅಕಾಡೆಮಿ ಫೆಲೋಶಿಪ್, 'ಚಾಮುಂಡೇಶ್ವರಿ ಭವನ' ಕಾದಂಬರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ವರ್ಧಮಾನ ಪ್ರಶಸ್ತಿ ದೊರೆತಿವೆ.

Edited By :
PublicNext

PublicNext

05/11/2026 10:14 am

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ