ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲಿ ಬಸ್ ದರ ಏರಿಕೆ ಖಂಡಿಸಿ ಪ್ರತಿಭಟನೆ: ಕರವೇ ಸ್ವಾಭಿಮಾನಿ ಬಣದಿಂದ ಸರ್ಕಾರಕ್ಕೆ ಎಚ್ಚರಿಕೆ

ಸಾರಿಗೆ ಬಸ್ ದರ ಏರಿಕೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಜಮಾಯಿಸಿದ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ಬಸ್‌ಗಳನ್ನು ತಡೆದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕಿರಣ್, ಸರ್ಕಾರ ತಕ್ಷಣವೇ ಹೆಚ್ಚಿಸಿರುವ ಸಾರಿಗೆ ದರವನ್ನು ವಾಪಸ್ ಪಡೆಯಬೇಕು. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನರ ಜೇಬಿಗೆ ಸರ್ಕಾರ ಸಾರಿಗೆ ದರ ಏರಿಸುವ ಮೂಲಕ ಕನ್ನ ಹಾಕುತ್ತಿದೆ ಎಂದು ಕಿಡಿಕಾರಿದರು.

ಕೂಡಲೇ ಸಾರಿಗೆ ದರವನ್ನು ಇಳಿಸದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಿ, ರಾಜ್ಯಾದ್ಯಂತ ಬೃಹತ್ ಚಳವಳಿ ರೂಪಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬಸ್ ನಿಲ್ದಾಣದ ಎದುರು ಬಸ್ ತಡೆದು ಪ್ರತಿಭಟನೆ ನಡೆಸಿದ ಕಾರಣ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Edited By :
PublicNext

PublicNext

05/11/2026 10:56 am

Cinque Terre

1.76 K

Cinque Terre

0

ಸಂಬಂಧಿತ ಸುದ್ದಿ