ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಡಗೋಡದಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ವ್ಯಕ್ತಿಯ ಕಾಲು ಅಪ್ಪಚ್ಚಿ!

ಮುಂಡಗೋಡ : ತಾಲೂಕಿನ ಕೊಪ್ಪ ಗ್ರಾಮದ ಇಂದಿರಾನಗರ ಸಮೀಪದ ಕಲಘಟಗಿ ಮುಖ್ಯ ರಸ್ತೆಯಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಮೆಂಟ್, ಜಲ್ಲಿಕಲ್ಲು ಹಾಗೂ ಕಬ್ಬಿಣದ ಸಾಮಗ್ರಿಗಳನ್ನು ತುಂಬಿಕೊಂಡಿದ್ದ ಟ್ರ್ಯಾಕ್ಟರ್ ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ನಂದಿಗಟ್ಟಾದಿಂದ ಮುಂಡಗೋಡ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಪಕ್ಕಕ್ಕೆ ಮಗುಚಿ ಬಿದ್ದಿದ್ದು, ಅದೇ ಸಮಯದಲ್ಲಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದಿದೆ. ಪರಿಣಾಮ ವ್ಯಕ್ತಿಯ ಕಾಲು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ತೀವ್ರ ರಕ್ತಸ್ರಾವದೊಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಕ್ಷಣ ಗಾಯಾಳುವನ್ನು ಮುಂಡಗೋಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಮೇಶ್ ತಾಳಿಕೋಟಿ, ಪಬ್ಲಿಕ್ ನೆಕ್ಸ್ಟ್, ಮುಂಡಗೋಡ.

Edited By :
PublicNext

PublicNext

05/11/2026 11:21 am

Cinque Terre

1.88 K

Cinque Terre

0

ಸಂಬಂಧಿತ ಸುದ್ದಿ