ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಸ್ ಪ್ರಯಾಣದರ ಏರಿಕೆ ಖಂಡಿಸಿ ಕನ್ನಡ ಸಂಘಟನೆ ಪ್ರತಿಭಟನೆ

ಚಾಮರಾಜನಗರ : ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ತಮಟೆ ಚಳವಳಿ ನಡೆಸಿದರು.

ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ತಮಟೆ ಹೊಡೆದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷ ಘೋಷಣೆ ಕೂಗಿ ಆಕ್ರೋಶ ಅವರ ಹಾಕಿದರು.

ರಾಜ್ಯ ಸರ್ಕಾರ ಏಕಾಏಕಿ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿ ಜನರನ್ನು ಮತ್ತಷ್ಟು ಸಂಕಷ್ಡಕ್ಕೆ ಸಿಲುಕಿಸಿದೆ. ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಬಸ್ ಪ್ರಯಾಣದರವನ್ನು ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆದಿದೆ.ಲಿದೆ ಸರ್ಕಾರ ಕೂಡಲೇ ಏರಿಕೆ ಮಾಡಿರುವ ಬಸ್ ಪ್ರಯಾಣದರವನ್ನು ಕಡಿಮೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ಜನರು ನಿಮಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದರು.

Edited By : PublicNext Desk
PublicNext

PublicNext

05/11/2026 12:05 pm

Cinque Terre

1.66 K

Cinque Terre

0

ಸಂಬಂಧಿತ ಸುದ್ದಿ