ಬೆಂಗಳೂರು : ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಹೊಸಕೋಟೆ ತಾಲೂಕಿನ ನಿಡಘಟ್ಟ ಗೇಟ್ ಬಳಿ ದಾಳಿ ನಡೆಸಿದ ಪೊಲೀಸರು, ಆರೋಪಿಗಳಿಂದ ಬರೋಬ್ಬರಿ 8 ಕೆಜಿ 750 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಇದಲ್ಲದೆ, ಕೃತ್ಯಕ್ಕೆ ಬಳಸಿದ್ದ ಎರಡು ಬೈಕ್‌ಗಳು ಹಾಗೂ ಏಳು ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು, ಹೊಸಕೋಟೆ ಹಾಗೂ ಹಾಸನ ಮೂಲದ ಪ್ರವೀಣ್, ಅಕ್ಷಯ್, ಉತ್ತಮ್, ಅಭಿಲಾಷ್, ಮನೋಹರ್ ಮತ್ತು ರಾಕೇಶ್ ಬಂಧಿತ ಆರೋಪಿಗಳಾಗಿದ್ದಾರೆ.
ಡಿವೈಎಸ್ಪಿ ಮಲ್ಲೇಶಯ್ಯ ಹಾಗೂ ಇನ್ಸ್‌ಪೆಕ್ಟರ್ ಗೋವಿಂದ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
PublicNext
05/11/2026 12:07 pm
LOADING...