ಮೈಸೂರು : ನಂಜನಗೂಡು ತಾಲೂಕಿನ ಆಕಳ ಗ್ರಾಮದ ಸುತ್ತಮುತ್ತ ಡ್ರೋನ್ ಕ್ಯಾಮೆರಾದಲ್ಲಿ ಒಂದೇ ಬಾರಿಗೆ ನಾಲ್ಕು ಹುಲಿಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಎರಡು ದಿನಗಳ ಹಿಂದಷ್ಟೇ ಗ್ರಾಮದ ರೈತ ಪರಮೇಶ್ ಅವರ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಳಿಸಿತ್ತು. ಅಲ್ಲದೆ, ನಿನ್ನೆ ಡೋರನಕಟ್ಟೆ ಕಾಲೋನಿಯಲ್ಲಿ ಆದಿವಾಸಿ ಮಹಿಳೆಯೊಬ್ಬರನ್ನು ಹುಲಿ ಬಲಿ ಪಡೆದಿತ್ತು. ಈ ಘಟನೆಗಳ ಬಳಿಕ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿ ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದರು.
ಇದೀಗ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಹುಲಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ. ಕಾರ್ಯಾಚರಣೆಯ ಭಾಗವಾಗಿ ಡ್ರೋನ್ ಕ್ಯಾಮೆರಾ ಮೂಲಕ ಅರಣ್ಯ ಪ್ರದೇಶದಲ್ಲಿ ನಿಗಾ ವಹಿಸಲಾಗಿದ್ದು, ನಿನ್ನೆ ರಾತ್ರಿ ನಾಲ್ಕು ಹುಲಿಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಒಂದೇ ಪ್ರದೇಶದಲ್ಲಿ ನಾಲ್ಕು ಹುಲಿಗಳು ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆಯು ಹುಲಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ.
PublicNext
05/11/2026 01:04 pm
LOADING...