ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತ ಮುಖಂಡರ ವಶಕ್ಕೆ ಖಂಡನೆ : ಕಬ್ಬೂರ ಪಟ್ಟಣ ಬಂದ್ ಮಾಡಿ ರೈತರ ಆಕ್ರೋಶ!

ಚಿಕ್ಕೋಡಿ: ಕಬ್ಬು ಬೆಳೆಗಾರರ ಹೋರಾಟಕ್ಕೆ ಮತ್ತಷ್ಟು ಕಿಚ್ಚು ಹೆಚ್ಚಿದೆ.ಚೂನಪ್ಪ ಪೂಜೇರಿ, ಶಶಿಕಾಂತ್ ಪಡಸಲಗಿ ಸೇರಿದಂತೆ ಪ್ರಮುಖ ರೈತ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ರೈತರ ಆಕ್ರೋಶ ಭುಗಿಲೆದ್ದಿದೆ.

ರೈತ ಮುಖಂಡರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದಲ್ಲಿ ರೈತರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಅಲ್ಲದೆ, ರಾಜ್ಯ ಹೆದ್ದಾರಿಯನ್ನು ತಡೆದು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗೆ ಕಲ್ಲು ಹಾಗೂ ಮುಳ್ಳುಗಳನ್ನು ಅಡ್ಡಲಾಗಿ ಹಾಕಿ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿದ ರೈತರು, ತಮ್ಮ ಮುಖಂಡರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಕಬ್ಬು ಬೆಳೆಗಾರರ ಹೋರಾಟದ ಕಾವು ಇದೀಗ ಕಬ್ಬೂರ ಪಟ್ಟಣದಲ್ಲೂ ತೀವ್ರಗೊಂಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Edited By : Vinayak Patil
PublicNext

PublicNext

05/11/2026 01:22 pm

Cinque Terre

1.47 K

Cinque Terre

0

ಸಂಬಂಧಿತ ಸುದ್ದಿ