ಚಾಮರಾಜನಗರ : ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿರುವ ಚುನಾವಣಾ ಆಯೋಗದ ಕಮಿಷನರ್ ಜ್ಞಾನೇಶ್ ಕುಮಾರ್ ರನ್ನು ವಜಾಗೊಳಿಸುವಂತೆ ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇಗುಲದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ಕಮಿಷನರ್ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆಯನ್ನು ಕೂಗಿ ಆಕ್ರೋಶ ಹೊರ ಹಾಕಿದರು. ಬಳಿಕ ಅಲ್ಲಿಂದ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಶ್ರೀ ಭುವನೇಶ್ವರಿ ವೃತ್ತದಲ್ಲಿ ವಾಹನ ಸಂಚಾರಿ ನಡೆಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಬಳಿಕ ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಅಲ್ಲಿಯೂ ಕೂಡ ಕೆಲಕಾಲ ಪ್ರತಿಭಟನೆ ನಡೆಸಿದರು.
ಎಸ್ಐಆರ್ ಪ್ರಕ್ರಿಯೆಯಿಂದಾಗಿ ದೇಶಾದ್ಯಂತ ಹದಿಮೂರು ಕೋಟಿ ಮತಚೋರಿಯಾಗಿದೆ. ಈ ವಿಚಾರದಲ್ಲಿ ಚುನಾವಣಾ ಆಯೋಗದ ಆಯುಕ್ತರು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಹಾಗೂ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಡೆದುಕೊಳ್ಳುತ್ತಿದ್ದಾರೆ. ಮತಚೋರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಚುನಾವಣೆಯ ಆಯೋಗ ಶಾಮಿಲಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಎಸ್ಐಆರ್ ಪ್ರಕ್ರಿಯೆಯನ್ನು ಕೈ ಬಿಟ್ಟು, ಜ್ಞಾನೇಶ್ ಕುಮಾರ್ ಅವರನ್ನು ವಜಾ ಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
PublicNext
05/11/2026 01:22 pm
LOADING...