ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕರಗುಪ್ಪಿ–ಪಾಶ್ಚಾಪುರ ರಸ್ತೆಯಲ್ಲಿ ರೈತರು ಪ್ರತಿಭಟನೆ ನಡೆಸಿ, ಪೊಲೀಸರ ವಾಹನಕ್ಕೆ ಬೇಲಿ ಹಾಕಿ ತಡೆದ ಘಟನೆ ನಡೆದಿದೆ.
ಪ್ರತಿಭಟನಾಕಾರರನ್ನು ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಗೋಕಾಕ ಗುಡ್ಡದ ಕಡೆಗೆ ಕರೆದೊಯ್ಯುತ್ತಿದ್ದ ವೇಳೆ ರೈತರು ವಾಹನಕ್ಕೆ ಅಡ್ಡಲಾಗಿ ಬೇಲಿ ಹಾಕಿ ತಡೆದಿದ್ದಾರೆ.
ಇದೇ ವೇಳೆ, ವಾಹನದಲ್ಲಿ ಕರೆದೊಯ್ಯುವ ಸಂದರ್ಭದಲ್ಲಿ ಪೊಲೀಸರು ಕುಡಿಯಲು ನೀರು ನೀಡದೆ ಸತಾಯಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಸ್ವಸ್ಥಗೊಂಡ ಪ್ರತಿಭಟನಾಕಾರರಿಗೆ ಬಸಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರ ಆಕ್ರೋಶ ಮುಂದುವರಿದಿದ್ದು, ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ.
PublicNext
05/11/2026 01:47 pm
LOADING...