ತುಮಕೂರು : ತುಮಕೂರು ನಗರದ ಶ್ರೀ ಶಿವಕುಮಾರಸ್ವಾಮಿ ವೃತ್ತದ ಹೆಸರನ್ನು ಬದಲಾಯಿಸುವುದಾಗಲೀ ಅಥವಾ ಮರುನಾಮಕರಣ ಮಾಡುವುದಾಗಲೀ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತುಮಕೂರು ಮಹಾನಗರ ಪಾಲಿಕೆ ಹಾಗೂ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ Outdoor L.E.D Display Board ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಸದರಿ ವೃತ್ತದ ಹೆಸರನ್ನು ಬದಲಾಯಿಸುವುದಾಗಲೀ ಅಥವಾ ಮರುನಾಮಕರಣ ಮಾಡುವುದಾಗಲೀ ಈ ಕಾಮಗಾರಿಯ ಉದ್ದೇಶವಾಗಿರುವುದಿಲ್ಲ.
ಈ ಕಾಮಗಾರಿಯು ಕೇವಲ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಮೆರುಗನ್ನು ಹೆಚ್ಚಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದ್ದು, ಯಾವುದೇ ರೀತಿಯ ಹೆಸರು ಬದಲಾವಣೆ ಮಾಡುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
PublicNext
05/11/2026 02:07 pm
LOADING...