ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಮನೆಯಲ್ಲಿ ಇಸ್ಪೀಟ್ ಆಡುತ್ತಿದ್ದ 21 ಮಂದಿ ಅರೆಸ್ಟ್; 43,050 ನಗದು ಹಣ ಜಪ್ತಿ

ಹುಬ್ಬಳ್ಳಿ : ಮನೆಯಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಗೋಕುಲರೋಡ್ ಪೊಲೀಸರು ದಾಳಿ ನಡೆಸಿ, ಬರೋಬ್ಬರಿ 21 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಜೂಜಾಟಕ್ಕೆ ಬಳಸುತ್ತಿದ್ದ 43,050 ರೂ. ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಹೌದು, ಗೋಕುಲರೋಡ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮಲಿಂಗೇಶ್ವರ ನಗರದ ವೇಮನ ಸೂಪರ್ ಹತ್ತಿರದ ಮನೆಯೊಂದರಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯೊಳಗೆ ಇಸ್ಪೀಟ್ ಅಂದರ್-ಬಾಹರ್ ಆಡುತ್ತಿದ್ದ 21 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ 43,050 ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಗೋಕುಲರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ನಗರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಗಳಲ್ಲಿ ಅಕ್ರಮವಾಗಿ ಜೂಜಾಟ ನಡೆಸುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

-ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/11/2026 02:15 pm

Cinque Terre

13.46 K

Cinque Terre

1

ಸಂಬಂಧಿತ ಸುದ್ದಿ