ಬೆಳಗಾವಿ : ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತ ಮುಖಂಡ ಹಾಗೂ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ರೈತರು, 'ಬಿಡಲೇಬೇಕು, ಬಿಡಲೇಬೇಕು, ಚೂನಪ್ಪನನ್ನು ಬಿಡಲೇಬೇಕು' ಎಂದು ಘೋಷಣೆ ಕೂಗುತ್ತಾ ರಸ್ತೆಯಲ್ಲೇ ಕುಳಿತು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರರನ್ನು ಕರೆದೊಯ್ಯಲು ಬಂದಿದ್ದ ಪೊಲೀಸ್ ಬಸ್‌ಗೆ ರೈತರು ಮುತ್ತಿಗೆ ಹಾಕಿ, ಬಸ್‌ನಲ್ಲಿದ್ದ ರೈತರನ್ನು ಕೆಳಗಿಳಿಸಿದರು. ಅಲ್ಲದೆ, ಬಸ್ ಮುಂದಕ್ಕೆ ತೆರಳದಂತೆ ತಡೆದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚೂನಪ್ಪ ಪೂಜಾರಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಟ್ಟು ಹಿಡಿದ ರೈತರು ಸ್ಥಳದಲ್ಲೇ ಪ್ರತಿಭಟನೆ ಮುಂದುವರಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಐದಾರು ಪೊಲೀಸ್ ಬಸ್‌ಗಳಲ್ಲಿ ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆದರು.
ಈ ಘಟನೆಯಿಂದ ಚನ್ನಮ್ಮ ವೃತ್ತದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
PublicNext
05/11/2026 02:19 pm
LOADING...