ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ದೀಪಾವಳಿ ಕೊಡುಗೆ ಕೊಟ್ಟ ಸಿಎಂ ಡಿಕೆಶಿ, ರಜತ್ ಉಳ್ಳಾಗಡ್ಡಿಮಠ ಶ್ಲಾಘನೆ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ 34, 35 ಮತ್ತು 36ನೇ ತಲಾ 6,000ರಂತೆ ಕಂತುಗಳ ಒಟ್ಟು 7,405.86 ಕೋಟಿ ರೂಪಾಯಿ ಅನುದಾನವನ್ನು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಜತ್ ಉಳ್ಳಾಗಡ್ಡಿಮಠ ಅವರು ತಿಳಿಸಿದ್ದಾರೆ.

ಈ ಕುರಿತು ವಿವರ ನೀಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 33 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಇದೀಗ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ 34ನೇ ಕಂತಿನ 2,500 ಕೋಟಿ ರೂ., 35ನೇ ಕಂತಿನ 2,452.93 ಕೋಟಿ ರೂ. ಹಾಗೂ 36ನೇ ಕಂತಿನ 2,452.93 ಕೋಟಿ ರೂ. ಸೇರಿದಂತೆ ಮೂರು ಕಂತುಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲಾಗಿದೆ.

ಈ ಮೂಲಕ ಯೋಜನೆಯಾರಂಭದಿಂದ ಪ್ರತಿಯೊಬ್ಬ ಫಲಾನುಭವಿಗೆ ಇದುವರೆಗೆ ಒಟ್ಟಾರೆಯಾಗಿ 72,000 ರೂಪಾಯಿ ನೇರ ನಗದು ಸೌಲಭ್ಯ ಸಿಕ್ಕಂತಾಗಿದೆ. ತಕ್ಷಣವೇ 'ಖಜಾನೆ-2' ವ್ಯವಸ್ಥೆಯ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲು ರಾಜ್ಯದ ಎಲ್ಲಾ 31 ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ಸೂಚನೆ ನೀಡಲಾಗಿದೆ.

ಬರಗಾಲ ಹಾಗೂ ಬೆಲೆ ಏರಿಕೆಯ ಈ ಸವಾಲಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಕೈಗೆ ಆರ್ಥಿಕ ಶಕ್ತಿ ನೀಡಿದೆ. ದೀಪಾವಳಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ಈ ಬೃಹತ್ ಮೊತ್ತದ ಅನುದಾನ ಬಿಡುಗಡೆ ಮಾಡಿದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಜತ್ ಉಳ್ಳಾಗಡ್ಡಿಮಠ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/11/2026 02:44 pm

Cinque Terre

8.03 K

Cinque Terre

7

ಸಂಬಂಧಿತ ಸುದ್ದಿ